೧."ಮನುಷ್ಯ ಜಾತಿ ತಾನೊಂದೆ ವಲಂ" ಎಂಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
೨.ವರ್ಣಾಶ್ರಮವನ್ನು ತಿದ್ದುವುದಿಲ್ಲ, ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಅಂದರೆ ಬ್ರಾಹ್ಮಣ, ಕ್ಷತ್ರಿಯ, ವೈಶ್ಯ, ಶೂದ್ರ, ಅಂತ್ಯಜ, ಶಿಯಾ-ಸುನ್ನಿ ಕ್ಯಾಥೋಲಿಕ್ ,ನಿರಂಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
೩.ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
೪.'ಮತ' ತೊಲಗಿ "ಅಧ್ಯಾತ್ಮ" ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
೫.ಮತ 'ಮನುಜಮತ' ವಾಗಬೇಕು; ಪಥ 'ವಿಶ್ವಪಥ' ವಾಗಬೇಕು; ಮನುಷ್ಯ 'ವಿಶ್ವಮಾನವ" ನಾಗಬೇಕು.
೬.ಮತ ಗುಂಪು ಕಟ್ಟುವ ವಿಷಯವಾಗಬಾರದು ಯಾರು ಯಾವ ಒಂದು ಮತಕ್ಕೂ ಸೇರಿದೆ, ಪ್ರತಿಯೊಬ್ಬನೂ ತಾನು ಕಂಡುಕೊಳ್ಳುವ 'ತನ್ನ ಮತಕ್ಕೆ' ಮಾತ್ರ ಬೇಕು. ಅಂದರೆ ಜಗತ್ತಿನಲ್ಲಿ ಎಷ್ಟು ವ್ಯಕ್ತಿಗಳಿದ್ದಾರೋ ಅಷ್ಟೇ ಸಂಖ್ಯೆಯ ಮತಗಳಿರುವಂತಾಗುತ್ತದೆ. ಯಾರೊಬ್ಬರೂ ಇನ್ನೊಬ್ಬರ ಮತಕ್ಕೆ ಸೇರಿ ಗುಂಪುಕಟ್ಟಿ ಜಗಳ ಹಚ್ಚುವಂತಾಗಬಾರದು.
೭.ಯಾವ ಒಂದು ಗ್ರಂಥವೂ "ಏಕೈಕ ಪರಮ ಪೂಜೆ"ಧರ್ಮಗ್ರಂಥ ವಾಗಬಾರದು ಪ್ರತಿಯೊಬ್ಬ ವ್ಯಕ್ತಿಯು ತನಗೆ ಸಾಧ್ಯವಾದವುಗಳನ್ನೆಲ್ಲ ಓದಿ ತಿಳಿದು ತನ್ನ 'ದರ್ಶನ'ವನ್ನು ತಾನೇ ನಿರ್ಣಯಿಸಿ ಕಟ್ಟಿಕೊಳ್ಳಬೇಕು.
----#ಕುವೆಂಪು.